ಸಿಬಿಐ ದಾಳಿಗೂ ಸಂಬಂಧ ಇಲ್ಲ: ಅಶ್ವತ್ಥ ನಾರಾಯಣ

ಸಿಬಿಐ ದಾಳಿಗೂ ಸಂಬಂಧ ಇಲ್ಲ: ಅಶ್ವತ್ಥ ನಾರಾಯಣ

ಬೆಂಗಳೂರು : ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ. ಉಪ ಚುನಾವಣೆಗೂ ಈ ದಾಳಿಗೂ ಯಾವುದೇ ಸಂಬಂಧ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈಗಾಗಲೇ ಡಿಕೆ ಶಿವಕುಮಾರ್ ಅವರ ಮೇಲೆ ಆದಾಯ ತೆರಿಗೆ ಹಾಗೂ ದಾಳಿ ನಡೆದಿತ್ತು. ಅದರ ಮುಂದುವರಿದ ಭಾಗವಾಗಿ ಸಿಬಿಐ ದಾಳಿ ನಡೆದಿರಬಹುದು. ಹೀಗಾಗಿ ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ’ ಎಂದರು.

ಸಮಾಜದಲ್ಲಿ ವ್ಯಕ್ತಿಗಿಂತ ವ್ಯವಸ್ಥೆಯೇ ದೊಡ್ಡದು. ಇದರಲ್ಲಿ ನಂಬಿಕೆ ಹೆಚ್ಚುವ ರೀತಿಯಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಸತ್ಯ ಏನೆಂದು ಹೊರಬರಲಿ. ಇನ್ನು ತನಿಖೆಗೆ ಸಹಕಾರ ನೀಡುವುದಾಗಿ ಸ್ವತಃ ಶಿವಕುಮಾರ್ ಹೇಳಿದರು.

Related