CBSE 10ನೇ ತರಗತಿ ಫಲಿತಾಂಶ ಪ್ರಕಟ

CBSE 10ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.

ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.

10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲೂ ಬಾಲಕಿಯರು ಮೇಲುಗೈ ಸಂಪಾದಿಸಿದ್ದಾರೆ. ಶೇ. 94.25ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದರೆ, ಶೇ.92.27ರಷ್ಟು ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಫಲಿತಾಂಶವನ್ನು ಅಧಿಕೃತ ವೆಬ್‌ ಸೈಟ್‌ ಗಳಾದ http://cbse.nic.in ಮತ್ತು http://cbse.gov.inನಲ್ಲಿ ಪೋಸ್ಟ್ ಮಾಡಲಾಗಿದೆ. ವಿದ್ಯಾರ್ಥಿಗಳು ಇಲ್ಲಿ ಫಲಿತಾಂಶಗವನ್ನು ನೋಡಬಹುದು.

Related