ಸಿಡಿ ಫ್ಯಾಕ್ಟರಿ ಬಂದ್, ಮುಡಾ ಫ್ಯಾಕ್ಟರಿ ಓಪನ್: ಎಚ್‌ ಡಿಕೆ

ಸಿಡಿ ಫ್ಯಾಕ್ಟರಿ ಬಂದ್, ಮುಡಾ ಫ್ಯಾಕ್ಟರಿ ಓಪನ್: ಎಚ್‌ ಡಿಕೆ

ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಗ್ರಾಸವಾಗಿ ಚರ್ಚೆಯಾಗುತ್ತಿರುವ ಮುಡಾ  ಸೈಟ್‌ ಹಂಚಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿರೋಧ ಪಕ್ಷದ ನಾಯಕರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನೆಯನ್ನು ಕೈಗೊಳ್ಳುತ್ತಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವವರೇ ಈಗ ಮುಡಾ ಪ್ರಕರಣವನ್ನು ಬಯಲಿಗೆಳೆದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಎಚ್ ಡಿ ಕೆ ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ಯಾಕೆ?

ನಗರದಲ್ಲಿಂದು ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳ ಹಿಂದೆ ಸಿಡಿ ಫ್ಯಾಕ್ಟ್ರಿ ಓಪನ್ ಮಾಡಿದ್ದರು ಅದನ್ನು ಈಗ ಬಂದ್ ಮಾಡಿ ಮತ್ತೆ ಇದೀಗ ಮುಡಾ ಫ್ಯಾಕ್ಟರಿಯನ್ನು ಓಪನ್ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರು ರಾಜ್ಯ ಸರ್ಕಾರಕ್ಕೆ ಟೀಕಿಸಿದ್ದಾರೆ.

ಮುಡಾ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

 

Related