ಡಿ ಬಾಸ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ

ಡಿ ಬಾಸ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ಇಂದು ಕನ್ನಡ ಚಿತ್ರರಂಗದ ಖ್ಯಾತ ನಟರಾಗಿರುವ ದರ್ಶನ್ ತೂಗುದೀಪ ಅವರಿಗೆ ಹುಟ್ಟು ಹಬ್ಬದ ಸಂಭ್ರಮ.

ಇನ್ನು ದರ್ಶನ್ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ದರ್ಶನ್ ಅವರ ಮನೆ ಮುಂದೆ ಜಮಾಯಿಸಿದ್ದು ದರ್ಶನ್ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ದರ್ಶನ್ ರವರು ಈ ಬಾರಿ 47ರ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳ ಜೊತೆ ಹುಟ್ಟುಹಬ್ಬದ ಆಚರಣೆಯನ್ನು ಮಾಡಿಕೊಳ್ಳುತ್ತಿದ್ದಾರೆ. ನೆಚ್ಚಿನ ನಟನ ಜನ್ಮದಿನವನ್ನು ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ದಾಸನಿಗೆ ಎಲ್ಲ ಕಡೆಗಳಿಂದ ಶುಭಾಶಯ ಹರಿದು ಬರುತ್ತಿದೆ.

ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅವರು ಕಾಮನ್ ಡಿಪಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಡಿಬಾಸ್ ಹುಟ್ಟುಹಬ್ಬಕ್ಕಾಗಿ ಪ್ರತಿ ವರ್ಷ ಅಪಾರ ಅಭಿಮಾನಿಗಳು ಅವರ ಮನೆಯ ಬಳಿ ಬರುತ್ತಾರೆ. ಅಂತೆಯೇ ಈ ವರ್ಷವು ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಕೋರಲು ರಾಜ್ಯದ ವಿವಿಧೆಡೆಯಿಂದ ಮಧ್ಯರಾತ್ರಿಯೇ ಅಭಿಮಾನಿಗಳು ದರ್ಶನ್ ಮನೆ ಮುಂದೆ ಆಗಮಿಸಿದ್ದಾರೆ.

ಮಧ್ಯರಾತ್ರಿ 12 ಗಂಟೆಯಿಂದಲೇ ದರ್ಶನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಾಕಷ್ಟು ಜೋರಾಗಿಯೇ ಸೆಲೆಬ್ರೇಟ್ ಮಾಡುತ್ತಿದ್ದಾರೆ.

 

Related