ಕರ್ನಾಟಕ್ಕೆ ಭೇಟಿ ನೀಡಿದ ಕೇಂದ್ರ ಅಧ್ಯಯನ ತಂಡ

ಕರ್ನಾಟಕ್ಕೆ ಭೇಟಿ ನೀಡಿದ ಕೇಂದ್ರ ಅಧ್ಯಯನ ತಂಡ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜುಲೈ ಹಾಗೂ ಆಗಸ್ಟ್  ತಿಂಗಳಲ್ಲಿ ಸಂಭವಿಸಿದ ಮಳೆಹಾನಿ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಮಳೆ ಮತ್ತು ಪ್ರವಾಹದಿಂದ ಇಡೀ ರಾಜ್ಯ ತತ್ತರಿಸಿದೆ. ಈ ಮಧ್ಯೆ ಕೇಂದ್ರ ಅಧ್ಯಯನ ತಂಡವೊಂದು ವಸ್ತುಸ್ಥಿತಿ ಪರಿಶೀಲನೆಗೆ ರಾಜ್ಯಕ್ಕೆ ಆಗಮನಿಸಿದೆ. ಕೇಂದ್ರ ಅಧ್ಯಯನ ತಂಡದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಮಳೆ ಮತ್ತು ಪ್ರವಾಹದಿಂದ ಇಡೀ ರಾಜ್ಯ ತತ್ತರಿಸಿದೆ. ಈಗಾಗಲೇ ಪರಿಹಾರ ಕಾರ್ಯಾಚರಣೆಗಳಿಗೆ ರಾಜ್ಯ ಸರ್ಕಾರ ಮುಂದಡಿ ಇಟ್ಟಿದ್ದು, ಈ ಮಧ್ಯೆ ಕೇಂದ್ರ ಅಧ್ಯಯನ ತಂಡವೊಂದು ವಸ್ತುಸ್ಥಿತಿ ಪರಿಶೀಲನೆಗೆ ರಾಜ್ಯಕ್ಕೆ ಆಗಮನಿಸಿದೆ.

ಕೇಂದ್ರ ಅಧ್ಯಯನ ತಂಡದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದು, ರಾಜ್ಯದ ವಸ್ತುಸ್ಥಿತಿಯನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ತುರ್ತು ಪರಿಹಾರ ಕಾರ್ಯಾಚರಣೆಗಳಿಗೆ ಕೇಂದ್ರದ ನೆರವನ್ನು ಕೋರಿದರು.

ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಮಳೆಹಾನಿ ಕುರಿತು ಈ ಕೇಂದ್ರ ಅಧ್ಯಯನ ತಂಡ ಸಮೀಕ್ಷೆ ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡ, ರಾಜ್ಯದ ವಸ್ತಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ರಾಜ್ಯದ 17 ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ವ್ಯಾಪಕ ಮಳೆಯಾಗಿದೆ. ಮಳೆಯಿಂದ ಬೆಂಗಳೂರಿನ ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಪ್ರವಾಹ ಸೃಷ್ಟಿಯಾಗಿ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಬೊಮ್ಮಾಯಿ ವಿವರಣೆ ನೀಡಿದರು.

ಈ ಸಂರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

 

Related