ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರು 60 ದಾಟಿದರೂ ಕೂಡ 20ರ ಹರೆಯದ ಹುಡುಗನ ಹಾಗೆ ಆಕ್ಟ್ ಮಾಡುವ ಮೂಲಕ ಇಡೀ ಕನ್ನಡ ಚಿತ್ರರಂಗದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ.
ಶಿವರಾಜ್ ಕುಮಾರ್ ಸಿನಿಮಾ ಎಂದರೆ ಸಾಕು ಕನ್ನಡ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಪ್ರತಿಯೊಂದು ಸಿನಿಮಾದಲ್ಲೂ ಕೂಡ ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಕಾಣಿಸಿಕೊಂಡು ಅಭಿಮಾನಿಗಳ ಮನೆ ಗೆಲ್ಲುತ್ತಾರೆ. ಅದರಂತೆ ಇದೀಗ ಭೈರವನ ಅವತಾರದಲ್ಲಿ ತೆರೆ ಮೇಲೆ ಅಪ್ಪಳಿಸಲು ಸಜ್ಜಾಗಿದ್ದಾರೆ.
ಹೌದು, ನಟ ಶಿವರಾಜ್ ಕುಮಾರ್ ಅಭಿನಯದ ‘ಭೈರವನ ಕೊನೆ ಪಾಠ’ ಸಿನಿಮಾ ಈಗಾಗಲೇ ಟೈಟಲ್ ಮೂಲಕವೇ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದು ಈ ಸಿನಿಮಾ ಇದೀಗ ಪೋಸ್ಟರ್ ಬಿಡುಗಡೆ ಮಾಡಿ ಸಿನಿಮಾದ ಮೇಲೆ ಇನ್ನಷ್ಟು ಕುತೂಹಲ ಕೆರಳಿಸಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ಪೋಸ್ಟರಲ್ಲಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.
ಇನ್ನು ಭೈರವನ ಸಿನಿಮಾ ಪೋಸ್ಟರ್ ನಲ್ಲಿ ಶಿವರಾಜ್ಕುಮಾರ್ ಗಡ್ಡ ಹಾಗೂ ಮೀಸೆ ಬೆಳ್ಳಗಾಗಿದೆ. ಅವನು ಬೆನ್ನಿಗೆ ಬಾಣಗಳನ್ನು ಇಟ್ಟುಕೊಂಡಿದ್ದಾನೆ. ಅವನ ಕಡೆಯೂ ಒಂದಷ್ಟು ಬಾಣಗಳು ಬರುತ್ತಿವೆ. ಹಿಂಭಾಗದಲ್ಲಿ ಕುದುರೆ ಇದೆ. ‘ಭೈರವನ ಕೊನೆ ಪಾಠ’ ಎಂಬುದರ ಜೊತೆಗೆ ‘ರಾಜನಿಗೆ ಪಾಠಗಳು’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ. ಒಟ್ಟಾರೆ ಈ ಸಿನಿಮಾ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ.
ಹೇಮಂತ್ ರಾವ್ ಅವರು ಈ ಮೊದಲು ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಹಾಗೂ ಸೈಡ್ ಬಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಈಗ ಅವರು ಶಿವರಾಜ್ಕುಮಾರ್ ಜೊತೆ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.