ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರಿದ ಸಭಾಪತಿ!

ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರಿದ ಸಭಾಪತಿ!

ಹುಬ್ಬಳ್ಳಿ: ಸತತವಾಗಿ ಒಂದೇ ಕ್ಷೇತ್ರದಲ್ಲಿ ಎಂಟು ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದ್ದಾರೆ.

ಹೌದು, ಬಸವರಾಜ್ ಹೊರಟ್ಟಿಯವರು 1980 ರಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇನ್ನು ನಿನ್ನೆ ಬುಧವಾರದವರೆಗೆ 43 ವರ್ಷ 201 ದಿನಗಳ ಕಾಲ ಒಂದೇ ಕ್ಷೇತ್ರದಲ್ಲಿ ಪ್ರತಿನಿಧಿಯಾಗಿದ್ದಾರೆ. ಈ ದಾಖಲೆ ನಿರ್ಮಿಸುವುದಕ್ಕಾಗಿ ಅವರ ಹೆಸರನ್ನು ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಸಲಾಗಿದೆ.

ಕಳೆದ 4 ದಶಕಗಳಿಂದ ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದ ಸೇವೆಯಲ್ಲಿರುವ ಹೊರಟ್ಟಿ ಅವರು ಒಂದೇ ಕ್ಷೇತ್ರ(ಶಿಕ್ಷಕರ ಕ್ಷೇತ್ರ)ದಿಂದ 1980ರಿಂದ ಸತತ 8 ಬಾರಿ ಮೇಲ್ಮನೆಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ.

ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಭಾರತೀಯರ ವಿಶ್ವದಾಖಲೆಯನ್ನು ದಾಖಲು ಮಾಡುವ ಕೆಲಸ ಮಾಡಲಾಗುತ್ತದೆ. ಈ ಮೂಲಕ ಭಾರತೀಯರ ಸಾಧನೆಯನ್ನು ವಿಶ್ವದ ಮುಂದಿಡುವ ಕೆಲಸ ಆಗುತ್ತದೆ.

 

Related