ನೇಹಾ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

ನೇಹಾ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರು ಹತ್ಯೆಗಿಡಾಗಿದ್ದು, ಅವರ ನಿವಾಸಕ್ಕೆ ರಾಜಕೀಯ ವ್ಯಕ್ತಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಅದರಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದ್ರಿ ಅವರು ಭಾನುವಾರ ಭೇಟಿ ನೀಡಿ ನೇಹಾ ಹಿರೇಮಠ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾಧ್ಯವಾದಷ್ಟು ಬೇಗ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದರು. ನೇಹಾ ಸಾವನ್ನು ವೈಯಕ್ತಿಕ ಲಾಭಕ್ಕಾಗಿ ರಾಜಕೀಯಗೊಳಿಸಬಾರದು ಮತ್ತು ಹಾಗೆ ಮಾಡಿದ್ದರೆ ಅದು ಈ ನೆಲದ ಮಗಳಿಗೆ ಅವಮಾನ ಮಾಡಿದಂತೆ ಎಂದರು.

ಈ ಘಟನೆಯನ್ನು ತಮ್ಮ ಸ್ವಾರ್ಥಕ್ಕಾಗಿ ಅಥವಾ ರಾಜಕೀಯಗೊಳಿಸಲು ಯಾರಿಗೂ ಅವಕಾಶ ನೀಡಬೇಡಿ ಎಂದು ಪೋಷಕರಿಗೆ ಹೇಳಿದ್ದೇನೆ. ಏಕೆಂದರೆ ಅದು ನೇಹಾ ಅವರನ್ನು ಅವಮಾನಿಸಿದಂತೆ ಆಗುತ್ತದೆ. ನಾವು ನಿಜವಾಗಿಯೂ ಅವಳ ಬಗ್ಗೆ ಚಿಂತೆ ಮಾಡುತ್ತಿದ್ದರೆ, ನಾವೆಲ್ಲರೂ ಬಲವಾಗಿ ಬೆಂಬಲಿಸಬೇಕು ಮತ್ತು ಪೊಲೀಸರಿಗೆ ತನಿಖೆ ಮಾಡಲು ಅವಕಾಶ ಮಾಡಿಕೊಡಿ ಮತ್ತು ಸಾಧ್ಯವಾದಷ್ಟು ಬೇಗ, ಸಾವಿಗೆ ನ್ಯಾಯ ಪಡೆಯಬೇಕು ಎಂದು ಹೇಳಿದರು.

 

Related