ಚಾಲುಕ್ಯರ ಕಾಲದ ಶಾಸನ ಪತ್ತೆ

ಚಾಲುಕ್ಯರ ಕಾಲದ ಶಾಸನ ಪತ್ತೆ

ಶಿವಮೊಗ್ಗ, ಫೆ. 11 : ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆ ಹೋಬಳಿ ತಾಳಗುಪ್ಪ ಗ್ರಾಮದಲ್ಲಿ ಬಾದಾಮಿ ಚಾಲುಕ್ಯರ ಕಾಲದ ಸ್ಮಾರಕ ಶಾಸನ ಪತ್ತೆಯಾಗಿದೆ. ಗ್ರಾಮದ ಈಶ್ವರ-ಬಸವೇಶ್ವರ ದೇವಾಲಯ ಜೀರ್ಣೋದ್ಧಾರ ಉದ್ದೇಶದಿಂದ ದೇವಾಲಯ ಬಾಗಿಲು ಬಿಚ್ಚಿದಾಗ ತೋರಣದ ಕಲ್ಲಿನಲ್ಲಿ ಸ್ಮಾರಕ ಶಾಸನ ಪತ್ತೆ. 12ನೇ ಶತಮಾನ ದೇವಾಲಯ ಜೀರ್ಣೋದ್ಧಾರ ಮಾಡುವ ಶಾಸನ ನಡುವೆ ಗಂಧ (ರಂಧ್ರ) ಮಾಡಿ ತೋರಣ ಕಲ್ಲಾಗಿ ಬಳಸಲಾಗಿದೆ. ಲಿಪಿಯ ಆಧಾರದ ಮೇಲೆ ಇದು ಕ್ರಿ.ಶ 6-7ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯರ ಶಾಸನ ಎಂದು ಗೊತ್ತಾಗುತ್ತದೆ.

Related