ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ: ಡಿಸಿಎಂ

ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ: ಡಿಸಿಎಂ

ಮಂಡ್ಯ: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಉತ್ತಮ ಮಳೆ ಆಗುತ್ತಿದ್ದು ಇದರಿಂದ ರಾಜ್ಯದಲ್ಲಿರುವ ಎಲ್ಲಾ ನದಿಗಳು ಮತ್ತು ಡ್ಯಾಮ್ ಗಳು ತುಂಬಿ ತುಳುಕುತ್ತಿವೆ. ಕೆ ಆರ್ ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ..

ಇಂದು (ಸೋಮವಾರ ಜುಲೈ 22) ರಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, 25 ಜನರ ತಂಡ ಕಳುಹಿಸಿ ನಂತರ ವರದಿ ಕೊಡುತ್ತಾರೆ. ಆನಂತರ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತೇವೆ. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದರು. ಇದನ್ನೂ ಓದಿ: ಹೊಸ ದಾಖಲೆ ಸೃಷ್ಟಿಸುತ್ತಿರುವ ನಿರ್ಮಲಾ ಸೀತಾರಾಮನ್

ರಾಜ್ಯಕ್ಕೆ ಈ ಬಾರಿ ತಾಯಿ ಚಾಮುಂಡೇಶ್ವರಿ ಅನುಗ್ರಹಿಸಿದ್ದಾಳೆ ಆದ್ದರಿಂದ ರಾಜ್ಯದಲ್ಲಿ ಈ ಬಾರಿ ಎಲ್ಲಾ ಕಡೆಉತ್ತಮ ಮಳೆ ಆಗುತ್ತಿದೆ. ವರುಣನ ಕೃಪೆ, ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು. ಆದರೆ 20 ಟಿಎಂಸಿ ಬಿಡಲು ಹೇಳಿತ್ತು. ಅಷ್ಟನ್ನೂ ನಾವು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ನಾವು ಎಲ್ಲರನ್ನು ಕರೆದು ಚರ್ಚೆ ಮಾಡಿದ್ದೇವೆ. ಆನಂತರ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ ಎಂದು ಅವರು ಹೇಳಿದರು.

 

Related