ಚಂದ್ರಮುಖಿ-2 ಚಿತ್ರದ ಫಸ್ಟ್ ಲುಕ್ ರಿಲೀಸ್

ಚಂದ್ರಮುಖಿ-2 ಚಿತ್ರದ ಫಸ್ಟ್ ಲುಕ್ ರಿಲೀಸ್

ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಈ ಚಿತ್ರದಲ್ಲಿರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯಿದ್ದು ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಇನ್ನುಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿ. ಗಣೇಶ್ ಹಬ್ಬಕ್ಕೆ ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ಬರೆದುಕೊಂಡಿದ್ದಾರೆ.

Related