ಚಂದ್ರಶೇಖರ್ ಗುರೂಜಿ : 40ಸೆಕೆಂಡ್ ನಲ್ಲಿ 60 ಭಾರಿ ಚುಚ್ಚಿ ಕೊಲೆ

  • In Crime
  • July 5, 2022
  • 364 Views
ಚಂದ್ರಶೇಖರ್ ಗುರೂಜಿ : 40ಸೆಕೆಂಡ್ ನಲ್ಲಿ 60 ಭಾರಿ ಚುಚ್ಚಿ ಕೊಲೆ

ಸರಳ ವಾಸ್ತು ಮೂಲಕ ಜನಪ್ರಿಯರಾಗಿದ್ದ ಚಂದ್ರಶೇಖರ್ಗುರೂಜಿ ಅವರನ್ನು ಹುಬ್ಬಳ್ಳಿಯ ಹೋಟೆಲ್ನಲ್ಲಿ ದಾರುಣವಾಗಿ ಹತ್ಯೆ ಮಾಡಲಾಗಿದೆ. ಈಗಷ್ಟೇ ಸಿಸಿಟಿವಿಯಲ್ಲಿ ಘೋರ ಕೃತ್ಯದ ದೃಶ್ಯ ಸೆರೆಯಾಗಿದೆ. ಇಬ್ಬರು ಹಂತಕರು ಚಾಕುವಿನಿಂದ ಮತ್ತೆ ಮತ್ತೆ ಇರಿದು ಗುರೂಜಿಯನ್ನು ಕೊಲೆ ಮಾಡಿದ್ದಾರೆ.

ಹುಬ್ಬಳ್ಳಿ, ಜು 05 :  ಸರಳ ವಾಸ್ತು ಖ್ಯಾತಿಯ  ಗುರೂಜಿ ಚಂದ್ರಶೇಖರ್,ಹುಬ್ಬಳ್ಳಿಯ ಉಣಕಲ್ಕೆರೆ ಬಳಿಯ ಪ್ರೆಸಿಡೆಂಟ್ಹೋಟೆಲ್ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್ಗುರೂಜಿಯ ಆಶಿರ್ವಾದ ಪಡೆಯುವಂತೆ ಬರುತ್ತಾರೆ. ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಕೊನೆ ಉಸಿರಿರುವವರೆಗೂ ಚುಚ್ಚಿ ಸಾಯಿಸುತ್ತಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
40 ಸೆಕೆಂಡ್ಳಲ್ಲಿ 60 ಬಾರಿ ಚುಚ್ಚಿ ಕೊಲೆ:

ಸಿಸಿಟಿವಿ ದೃಶ್ಯ ಸಿಕ್ಕಿದ್ದು, ಚಂದ್ರಶೇಖರ್ಗುರೂಜಿಗೆ 60ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿರುವ ತೀವ್ರತೆಯನ್ನು ನೋಡಿದರೆ, ವೈಯಕ್ತಿಕ ವೈಷಮ್ಯದಿಂದಲೇ ಈ ಕೊಲೆ ಮಾಡಿರುವ ಸಾಧ್ಯತೆಯಿದೆ ಎನ್ನಲಾಗಿದೆ. ವೈಯಕ್ತಿಕ ದ್ವೇಷವಿದ್ದಾಗ ವ್ಯಕ್ತಿ ಒಳಗಿರುವ ಎಲ್ಲಾ ಸಿಟ್ಟನ್ನು ಈ ರೀತಿ ಹೊರ ಹಾಕಿರುವ ಸಾವಿರಾರುಪ ಪ್ರಕರಣಗಳು ನಮ್ಮ ಕಣ್ಣಮುಂದಿದೆ. ನಲವತ್ತು ಸೆಕೆಂಡ್ಗಳಲ್ಲಿ ಅರವತ್ತು ಬಾರಿ ಚುಚ್ಚಿ ಚಂದ್ರಶೇಖರ್ಗುರೂಜಿಯನ್ನು ಕೊಲೆ ಮಾಡಲಾಗಿದೆ. ಇಬ್ಬರು ಹಂತಕರು ಈ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಸುಮಾರು ಒಂದು ನಿಮಿಷಗಳ ಅಂತರದೊಳಗೆ ಚಂದ್ರಶೇಖರ್ಗುರೂಜಿಯನ್ನು ಹಂತಕರು ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಪ್ರಕರಣದ ಆರೋಪಿಗಳು ಹೋಟೆಲ್ನಿಂದ ಅಚೆ ಓಡಿ ಹೋಗುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಸಾಮಾನ್ಯವಾಗಿ ಬಾಡಿಗೆ ಹಂತಕರು ಈ ರೀತಿಯಾಗಿ ಹತ್ಯೆ ಮಾಡುವುದಿಲ್ಲ. ಬಾಡಿಗೆ ಹಂತಕರು ಕೊಲೆ ಮಾಡುವ ಸುಪಾರಿ ಪಡೆದ ನಂತರ ಸಾಯಿಸುವದಷ್ಟೇ ಮುಖ್ಯವಾಗಿರುತ್ತದೆ. ಈ ಎಲ್ಲವನ್ನೂ ಗಮನಿಸಿದರೆ ಯಾವುದೋ ಹಳೇ ದ್ವೇಷದಿಂದಲೇ ಈ ಕೃತ್ಯ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related