ರಸ್ತೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಿ- ಸಿಎಂ

ರಸ್ತೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಿ- ಸಿಎಂ

ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಇತ್ತೀಚೆಗೆ ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ಹಾಳಾಗಿದ್ದು, ದುರಸ್ಥಿ ಕರ‍್ಯ ನಡೆಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ರಸ್ತೆ ದುರಸ್ತಿಗೆ ರಾಜ್ಯ ಸರ್ಕಾರದಿಂದ ೩೦೦ ಕೋಟಿ ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ವಾಸ್ತವವಾಗಿ ಹಾನಿಗೊಳಗಾದ ಪ್ರದೇಶದ ದುರಸ್ಥಿಗೆ ಬಳಕೆ ಮಾಡಿಕೊಳ್ಳುವಂತೆ ಸಿಎಂ ಹೇಳಿದ್ದಾರೆ.

ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಕೃಷ್ಣಾರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related