ಭಾರತಕ್ಕೆ ಚೀನಾ ಎಚ್ಚರಿಕೆ!

ಭಾರತಕ್ಕೆ ಚೀನಾ ಎಚ್ಚರಿಕೆ!

ನವದೆಹಲಿ: ಭಾರತೀಯ ಸೈನಿಕರು ಉದ್ಧಟತನವನ್ನು ನಿಲ್ಲಿಸದೇ ಇದ್ದರೆ ಮುಂದಾಗುವ ಪರಿಣಾಮಗಳನ್ನು ಭಾರತ ಎದುರಿಸಬೇಕಾಗುತ್ತದೆ ಎಂದು ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಹೇಳಿದೆ.

ಭಾರತ ಏನಾದರೂ ಚೀನಾ ತಂಟೆಗೆ ಬಂದರೆ 1962ರ ಯುದ್ಧದಲ್ಲಿ ಆದ್ದಕ್ಕಿಂತ ಹೆಚ್ಚು ನಷ್ಟವನ್ನು ಉಂಟು ಮಾಡುವುದಾಗಿ ಹೇಳಿದೆ. ಎಲ್ಎಸಿನಲ್ಲಿ ಪ್ಯಾಂಗಾಂಗ್ ಲೇಕ್ ಬಳಿ ಚೀನಾ ಯೋಧರ ಅತಿಕ್ರಮಣವನ್ನು ಭಾರತೀಯ ಸೈನಿಕರು ಹಿಮ್ಮೆಟಿಸಿದ ಬೆನ್ನಲ್ಲೇ ಗ್ಲೋಬಲ್ ಟೈಮ್ಸ್ ತನ್ನ ಸಂಪಾದಕೀಯದಲ್ಲಿ ಭಾರತದ ವಿರುದ್ಧ ಕಿಡಿಕಾರಿದೆ. ಅಲ್ಲದೆ ಭಾರತ ಶಕ್ತಿಶಾಲಿ ಚೀನಾವನ್ನು ಎದುರು ಹಾಕಿಕೊಳ್ಳುತ್ತಿದೆ.

ಪ್ಯಾಂಗೋಂಗ್ ಟ್ಸೋ ಸರೋವರದ ಭಾಗದಲ್ಲಿ ಚೀನೀ ಸೈನಿಕರಿಂದ ಈ ಚಟುವಟಿಕೆ ನಡೆಯಬಹುದು ಎಂದು ಭಾರತದ ಪಡೆಗಳು ಮೊದಲೇ ಅಂದಾಜು ಮಾಡಿದ್ದವು. ಹಾಗಾಗಿ, ನಮ್ಮ ಸೇನಾ ನಿಯೋಜನೆ ಹೆಚ್ಚಿಸಿದೆ, ವಿವಾದಿತ ಗಡಿ ಸಮೀಪ ನಿಯೋಜನೆಗೊಂಡಿದ್ದ ಸೈನಿಕರು ಗಡಿ ಯಥಾಸ್ಥಿತಿಯನ್ನು ಮಾರ್ಪಾಡು ಮಾಡುವ ಚೀನಾ ದುರುದ್ದೇಶವನ್ನು ವಿಫಲಗೊಳಿಸಿದ್ದಾರೆ.

Related