ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ

ಚಿಕ್ಕಬಳ್ಳಾಪುರ : ಗುಡಿಬಂಡೆಯ ಹಿರೇನಾಗವೇಲಿಗೆ ಬಳಿ ಸ್ಪೋಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದ್ದ ದುರಂತ ಮರೆಯುವ ಮುನ್ನ ರಾಜ್ಯದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಕ್ವಾರಿ ಮಾಲೀಕರ ಕುರಿತು ರಾಜ್ಯ ಸರ್ಕಾರ ಮೃದು ಧೋರಣೆ ತಾಳಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು. ಹೀಗಾಗಿ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪರಿಶೀಲನೆ ನಡೆಸಿದರು. ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆದರು. ಘಟನೆಗೆ ನಿಜವಾದ ಕಾರಣಗಳೇನು..? ರಾತ್ರಿ ವೇಳೆ ಈ ಘಟನೆ ಸಂಭವಿಸಿದ್ದು ಹೇಗೆ.? ಎಂಬ ಬಗ್ಗೆ ಗೃಹ ಸಚಿವರು ಮಾಹಿತಿ ಪಡೆದುಕೊಂಡರು.

ಈ ವೇಳೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಈ ಘಟನೆ ಗಂಭೀರವಾಗಿ ಪರಿಗಣಿಸಿದ್ದೇನೆ. ತನಿಖೆಗೆ ಸಿಐಡಿಗೆ ವಹಿಸಿದ್ದೇನೆ. ತನಿಖಾ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತೇನೆ. ನನ್ನ ಇಲಾಖೆಯಿಂದಲೇ ತನಿಖೆ, ಕ್ರಮ ಆರಂಭಿಸುತ್ತೇನೆ ಎಂದು ಖಡಕ್ ಹೇಳಿಕೆ ನೀಡಿದ್ದಾರೆ.

Related