ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ಹೂ ಗುಚ್ಛ ನೀಡಿ ಗೌರವಿಸಿದರು.
ಕೇಂದ್ರ ಗೃಹ ಸಚಿವ ಅಮಿತ ಷಾರೊಂದಿಗೆ ಮುಖ್ಯಮಂತ್ರಿಗಳು ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಚಿವ ಮುರುಗೇಶ ನಿರಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.