ಹವಾಮಾನ ಕ್ರಿಯಾ ಯೋಜನೆ ಅನುಷ್ಠಾನಕ್ಕೆ ನಾಗರಿಕರು ಕೈ ಜೋಡಿಸಿ: ರಾಕೇಶ್ ಸಿಂಗ್

ಹವಾಮಾನ ಕ್ರಿಯಾ ಯೋಜನೆ ಅನುಷ್ಠಾನಕ್ಕೆ ನಾಗರಿಕರು ಕೈ ಜೋಡಿಸಿ: ರಾಕೇಶ್ ಸಿಂಗ್

ಬೆಂಗಳೂರು: ಬೆಂಗಳೂರು ಹವಾಮಾನ ಕ್ರಿಯಾ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಜೊತೆ ನಾಗರಿಕರು ಸಹ ಕೈಜೋಡಿಸಿದರೆ ತ್ವರಿತವಾಗಿ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ತಿಳಿಸಿದರು.

ನಗರದಲ್ಲಿ ಬೆಂಗಳೂರು ಹವಾಮಾನ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಕಾಸಸೌಧ ಸಮ್ಮೇಳನಾ ಇಂದು ನಡೆದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು 1980-1990ರಲ್ಲಿ ಯೋಜನಾ ರಹಿತವಾಗಿ ಅಭಿವೃದ್ಧಿಯಾಗುತ್ತಿತ್ತು. ಇದೀಗ ಯೋಜನಾಬದ್ಧವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಇದೇ ರೀತಿ ವ್ಯವಸ್ಥಿತವಾಗಿ ಅಭಿವೃದ್ಧಿ ಕಾರ್ಯಗಳು ನಡೆಸಿದಾಗ ಹಂತ-ಹಂತವಾಗಿ ಹವಾನಮಾನದಲ್ಲಿ ಪರಿಣಾಮಕಾರಿಯಾಗಿ ಗುಣಮಟ್ಟವನ್ನು ತರುವಲ್ಲಿ ಯಶಸ್ವಿಯಾಗಬಹುದಾಗಿದೆ ಎಂದರು.

ಬೆಂಗಳೂರಿನಲ್ಲಿ ಕಳೆದ 2 ದಶಕಗಳಿಂದ ಕ್ರಮೇಣ ಜನಸಂಖ್ಯೆ ಪ್ರಮಾಣ ಹೆಚ್ಚಾಗುತ್ತಲೇ ಬರುತ್ತಿದೆ. ಅದೇ ರೀತಿ ಕ್ರಮೇಣ ಆರ್ಥಿಕವಾಗಿಯೂ ಸದೃಢವಾಗುತ್ತಿದ್ದು, ದೇಶದಲ್ಲೇ ಅತ್ಯುನ್ನತ ನಗರವಾಗಿದೆ. ಆದರೆ, ನಗರದ ಪ್ರಮುಖ ಸಮಸ್ಯೆಗಳಾದ ಕುಡಿಯುವ ನೀರು, ಕಸ, ಸಂಚಾರ ದಟ್ಟಣೆ ಹಾಗೂ ವಾಯು ಗುಣಮಟ್ಟದಲ್ಲಿ ಹಿಂದೆಯಿದ್ದು, ಹವಾಮಾನ ಕ್ರಿಯಾಯೋಜನೆ ಅನುಷ್ಠಾನದ ಮೂಲಕ ಇವೆಲ್ಲಾ ಸಮಸ್ಯೆಯನ್ನು ಪರಿಹರಿಸಬಹುದಾಗಿದೆ ಎಂದು ಹೇಳಿದರು.

ಕಾರ್ಯಗಾರದಲ್ಲಿ ಹವಾಮಾನ ವೈಪರಿತ್ಯ ಘಟಕದ ಅಧ್ಯಕ್ಷರು ಹಾಗೂ ಅರಣ್ಯ/ಕೆರೆಗಳ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಸಿ40 ಸಿಟಿಸ್ ನ ಪ್ರಾದೇಶಿಕ ನಿರ್ದೇಶಕಿಯಾದ ಶೃತಿ ನಾರಾಯಣ್, ಅಭಿವೃದ್ಧಿ ಸಂಸ್ಥೆಗಳು ಹಾಗೂ ನಾಗರಿಕ ಸಮಾಜ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related