ಇಂಗ್ಲೆಂಡ್ ಗೆ ತೆರಳಬೇಕಿದ್ದ ಅಶ್ವಿನ್ ಗೆ ಕೊರೊನಾ ಪಾಸಿಟಿವ್..!

ಇಂಗ್ಲೆಂಡ್ ಗೆ ತೆರಳಬೇಕಿದ್ದ ಅಶ್ವಿನ್ ಗೆ ಕೊರೊನಾ ಪಾಸಿಟಿವ್..!

ಮುಂಬೈ: ಇಂಗ್ಲೆಂಡ್‌ಗೆ ತೆರಳಬೇಕಿದ್ದ ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಆರ್.ಅಶ್ವಿನ್‌ಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಶ್ವಿನ್ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಸದ್ಯ ಅವರು ಕ್ವಾರಂಟೈನ್‌ಗೆ ಒಳಗಾಗಿದ್ದು, ಸಂಪೂರ್ಣ ಗುಣಮುಖರಾದ ಬಳಿಕ ಇಂಗ್ಲೆಂಡ್‌ಗೆ ತೆರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಜುಲೈ 1 ರಿಂದ 5ರ ವರೆಗೆ ಇಂಗ್ಲೆಂಡ್‌ನ ಬರ್ಮಿಂಗ್ ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಸಮಯದ ಹೊತ್ತಿಗೆ ಅಶ್ವಿನ್ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡ ಅಭ್ಯಾಸ ಪಂದ್ಯವಾಡಲಿದೆ. ಒಂದು ವೇಳೆ ಅಭ್ಯಾಸ ಪಂದ್ಯ ಪೂರ್ಣಗೊಳ್ಳುವುದರೊಳಗೆ ಅಶ್ವಿನ್ ಚೇತರಿಸಿಕೊಳ್ಳದೇ ಇದ್ದಲ್ಲಿ, ಅವರು ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.

Related