ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನ ಹೆಚ್ಚಳಕ್ಕೆ ಸಿಎಂ ಅಸ್ತು!

ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನ ಹೆಚ್ಚಳಕ್ಕೆ ಸಿಎಂ ಅಸ್ತು!

ಬೆಂಗಳೂರು: ರಾಜ್ಯದಲ್ಲಿರುವಂತಹ ಅತಿಥಿ ಉಪನ್ಯಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವಧನ ಹೆಚ್ಚಳಕ್ಕೆ ಅನುಮೋದನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅವರಿಂದು ಉನ್ನತ ಶಿಕ್ಷಣ ಡಾ. ಎಂ.ಸಿ ಸುಧಾಕರ್ ಮತ್ತು ಮಾಜಿ ಎಂಎಲ್ಸಿ ಪುಟ್ಟಣ್ಣ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರ ನಿಯೋಗದ ಜೊತೆ ಅವರ ಬೇಡಿಕೆಗಳ ಕುರಿತು ಇಂದು ಚರ್ಚೆ ನಡೆಸಿ ಮಾತನಾಡಿದರು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.

 

Related