ಸಿಎಂ ಬಜೆಟ್ ಮಂಡನೆ ಹಳ್ಳಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ

ಸಿಎಂ ಬಜೆಟ್ ಮಂಡನೆ ಹಳ್ಳಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ

ಬೆಂಗಳೂರು: ಸಿಎಂ ಬೊಮ್ಮಾಯಿಯವರು ಇಂದು ಬಜೆಟ್‌ ಮಂಡನೆ ಪ್ರಾರಂಭವಾಗಿದ್ದು, ತಮ್ಮ ತವರು ಜಿಲ್ಲೆಯಾದ  ಹಾವೇರಿ ಜಿಲ್ಲೆ ಸವಣೂರಿನಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.

ಮನೆ ಮನೆಗೆ ಆರೋಗ್ಯ ಯೋಜನೆಯಡಿ ಪ್ರತಿ ಹಳ್ಳಿಯಲ್ಲಿ ವರ್ಷದಲ್ಲಿ ಎರಡು ಬಾರಿ ಆರೋಗ್ಯ ಶಿಬಿರವನ್ನು ಸ್ಥಳೀಯ ಕೇಂದ್ರಗಳ ಮೂಲಕ ಆಯೋಜನೆ ಮಾಡಲಾಗುವುದು.

ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಬಂಕಾಪುರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​​ನ್ನಾಗಿ ಉನ್ನತೀಕರಣ ಮಾಡಲಾಗುತ್ತದೆ ಎಂದು ಹೇಳಿದರು.

ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.

ಪಂಗಡಗಳು, ಅಂತೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಿಎಂ ಹೇಳಿದರು.

ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂಪಾಯಿ ಮೊತ್ತವನ್ನು ಬಜೆಟ್​ನಲ್ಲಿ ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್​ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದೆ.

 

Related