ಸಿಎಂ ಬದಲಾವಣೆ; ಯತ್ನಾಳ ನಿರ್ಧಾರ

ಸಿಎಂ ಬದಲಾವಣೆ; ಯತ್ನಾಳ ನಿರ್ಧಾರ

ಹುಬ್ಬಳ್ಳಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ನನಗೆ ಜವಾಬ್ದಾರಿಯ ಅರಿವಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿರರೊಂದಿಗೆ ಮಾತನಾಡಿದ ಅವರು, ಯತ್ನಾಳ ಆಗಾಗ ಇಂತಹ ಹೇಳಿಕೆ ನೀಡುತ್ತಿರುತ್ತಾರೆ. ಸೂಕ್ತ ಸಮಯದಲ್ಲಿ ಪಕ್ಷವು ಯತ್ನಾಳರ ಬಗೆಗೆ ನಿರ್ಧಾರ ತೆಗೆದುಕೊಳ್ಳಲಿದೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದರು.

‘ಕೋವಿಡ್-19 ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಹಾಗಾಗಿ ಶಾಸಕರ ನಿರೀಕ್ಷೆಗೆ ತಕ್ಕಷ್ಟು ಅನುದಾನ ಬಿಡುಗಡೆ ಸಾಧ್ಯವಾಗಿಲ್ಲ. ಈ ನಡುವೆಯೂ ಆದ್ಯತೆ ಮೇರೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

‘ಪ್ರವಾಹ ಸಂತ್ರಸ್ಥರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯಲ್ಲಿ ಉಳಿದುಕೊಂಡು ನಿರ್ವಹಣೆ ಮಾಡುತ್ತಿದ್ದಾರೆ. ಕೇಂದ್ರದಿಂದಲೂ ಎನ್‌ಡಿಆರ್‌ಎಫ್ ನಿಯಮಗಳ ಪ್ರಕಾರ ಪರಿಹಾರ ಬಂದಿದೆ. ಪರಿಹಾರ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ’ ಎಂದರು.

‘ಮನೆ ಬಿದ್ದವರಿಗೆ ಮರು ನಿರ್ಮಾಣಕ್ಕಾಗಿ 5 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮನೆಗಳ ನಿರ್ಮಾಣದ ಪ್ರಗತಿಯ ವರದಿ ಬಂದಿಲ್ಲ. ಕೂಡಲೇ ವರದಿ ಸಲ್ಲಿಸುವಂತೆ ಸೂಚಿಸಲಾಗುವುದು. ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗುವುದು ಎಂದು ಹೇಳಿದರು.

Related