ಸಿಎಂ ಕಲೆಕ್ಷನ್ ಮಾಸ್ಟರ್:  ಬಿಜೆಪಿ ಟೀಕೆ!

ಸಿಎಂ ಕಲೆಕ್ಷನ್ ಮಾಸ್ಟರ್:  ಬಿಜೆಪಿ ಟೀಕೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಗಾಗ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಇನ್ನು ಐಟಿ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ, ಸಿಎಂ ಒಬ್ಬ ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ.

ಹೌದು, ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಟೀಕಿಸಿದೆ. ಕಲೆಕ್ಷನ್ ಮಾಸ್ಟರ್ ಎಂದು ಬರೆದಿರುವ ಬಜೆಟ್ ಸೂಟ್‌ ಕೇಸ್ ಹಿಡಿದುಕೊಂಡ ಸಿದ್ದರಾಮಯ್ಯ ಚಿತ್ರವನ್ನು ಬಿಜೆಪಿ ಪೋಸ್ಟ್ ಮಾಡಿದೆ.

ಹಾಗೆ ಪಂಚರಾಜ್ಯಗಳ ಚುನಾವಣೆಗೆ ‘ಕೈ’​ ಹೈಕಮಾಂಡ್ ಟಾರ್ಗೆಟ್ ನೀಡಿದೆ ಮೊದಲನೇ ಹಂತದ 1000 ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು? ಎಂದು ಟ್ವೀಟ್ ಮೂಲಕ ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ತೆಲಂಗಾಣ ಕಾಂಗ್ರೆಸ್‌ಗೆ ₹300 ಕೋಟಿ, ಮಿಜೋರಾಂ ಕಾಂಗ್ರೆಸ್‌ಗೆ ₹100 ಕೋಟಿ, ಛತ್ತೀಸ್‌ಗಢ‌ ಹಾಗೂ ರಾಜಸ್ಥಾನ‌ ಕಾಂಗ್ರೆಸ್‌ಗೆ ತಲಾ ₹200 ಕೋಟಿ, ಮಧ್ಯಪ್ರದೇಶ‌ ಕಾಂಗ್ರೆಸ್‌ಗೆ 200 ಕೋಟಿ ರೂ. ಎಂದು ಬಿಜೆಪಿ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದೆ.

Related