ಸಿಎಂ, ಡಿಸಿಎಂ ಔತಣಕೂಟ; ಔತನಕೂಟದಲ್ಲಿ ಚರ್ಚೆಯಾಗಿದ್ದೇನೆ?

ಸಿಎಂ, ಡಿಸಿಎಂ ಔತಣಕೂಟ; ಔತನಕೂಟದಲ್ಲಿ ಚರ್ಚೆಯಾಗಿದ್ದೇನೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ನಿನ್ನೆ (ಬುಧವಾರ ಮೇ 22) ರಂದು ರಾತ್ರಿ ಔತಣಕೂಟವನ್ನು ಆಯೋಜಿಸಿದ್ದು, ಇದರಲ್ಲಿ ಎಲ್ಲಾ ಕಾಂಗ್ರೆಸ್ ನಾಯಕರಗಳು ಭಾಗಿಯಾಗಿ ಮಾತುಕತೆ ನಡೆಸಿದ್ದಾರೆ.

ಇನ್ನು ಈ ಔತಣಕೂಟದಲ್ಲಿ ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿಕಾಂಗ್ರೆಸ್‌ ಪಕ್ಷ ಎಷ್ಟು ಸೀಟುಗಳನ್ನು ಗೆಲ್ಲುತ್ತವೆ ಎಂಬ ಮಾತುಕತೆಯನ್ನು ನಡೆಸಿದ್ದಾರೆ.

ಅದರಂತೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ ಒಂದು ವರ್ಷ ಪೂರೈಸಿರುವುದರಿಂದ ಎಲ್ಲಾ ಸಚಿವ, ಶಾಸಕರಿಗೂ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಭ ಕೋರಿದ್ದಾರೆ.

28 ಕ್ಷೇತ್ರಗಳಲ್ಲಿ 15ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವು ಉತ್ತಮ ಸಾಧನೆ ಮಾಡಲಿದೆ ಎಂದು ಭಾವಿಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.  ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ: ಸತೀಶ್ ಜಾರಕಿಹೊಳಿ

ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡ ನಂತರ, ವಿರೋಧ ಪಕ್ಷಗಳ ಮಾತಿಗೆ ಸಿಲುಕದೆ ಹೇಗೆ ಸರ್ಕಾರ ಮುಂದುವರಿಯಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆ ಮುಗಿದು ಸರ್ಕಾರಕ್ಕೆಒಂದು ವರ್ಷ ಪೂರೈಸಿದ ಬಳಿಕ ಸಿದ್ದರಾಮಯ್ಯ ಸಂಪುಟದ ಎಲ್ಲ ಸಚಿವರ ಮೊದಲನೇ ಸಭೆ ಇದಾಗಿದೆ. ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರದಿಂದ ವರ್ಷಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ.

ಸಚಿವರಾದ ಡಾ. ಎಂಸಿ ಸುಧಾಕರ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ಎಂಬಿ ಪಾಟೀಲ್ ಮತ್ತು ಕೆಜೆ ಜಾರ್ಜ್ ಅವರು ಔತಣಕೂಟದಿಂದ ಪೂರ್ವ ನಿಗದಿತ ಕಾರ್ಯಕ್ರಮಗಳಿಂದಾಗಿ ಹೊರಗುಳಿದಿದ್ದರು. ಇವರಲ್ಲಿ ಒಂದಿಬ್ಬರು ವಿದೇಶದಲ್ಲಿದ್ದಾರೆ. ಉಳಿದಂತೆ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ, ಡಾ. ಜಿ ಪರಮೇಶ್ವರ, ಮಧು ಬಂಗಾರಪ್ಪ, ಎಚ್‌ಕೆ ಪಾಟೀಲ್, ಕೆಎಚ್ ಮುನಿಯಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.

 

Related