ಸಿಎಂ, ಡಿಸಿಎಂ ಟೆಂಪಲ್ ರನ್

ಸಿಎಂ, ಡಿಸಿಎಂ ಟೆಂಪಲ್ ರನ್

ಧರ್ಮಸ್ಥಳ: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಹೌದು, ಇಂದು ಶನಿವಾರ ಮೇ 25 ರಂದು ಸಿಎಂ ಮತ್ತು ದಿಸಿಎಂ ರವರು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆದಿದ್ದಾರೆ. ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ: ಸಿಎಂ

ಇ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Related