ಮಹದೇವಪುರಕ್ಕೆ ಸಿಎಂ, ಡಿಸಿಎಂ ಭೇಟಿ

ಮಹದೇವಪುರಕ್ಕೆ ಸಿಎಂ, ಡಿಸಿಎಂ ಭೇಟಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅದರಂತೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂದು (ಬುಧವಾರ ಮೇ 21) ರಂದು ಮಳೆಯಿಂದ ಹಾನಿ ಉಂಟಾಗಿರುವ ಪ್ರದೇಶಗಳ ಪರಿವೀಕ್ಷಣೆಗಾಗಿ ಮಾಡಿದರು.

ಈ ಸಂದರ್ಭದಲ್ಲಿ ಪಣತೂರು ‘ಎಸ್’ ಕ್ರಾಸ್ ಮತ್ತು ಪಣತೂರು ರೈಲ್ವೇ ಕೆಳಸೇತುವೆಯ ನಿರ್ಮಾಣದ ಸ್ಥಳ ಪರಿವೀಕ್ಷಣೆ ನಡೆಸಿ, ಈ ಕಾಮಗಾರಿಯಲ್ಲಿರುವ ಅಡೆತಡೆಗಳ ಬಗ್ಗೆ, ಕಾಮಗಾರಿಯು ಕುಂಠಿತವಾಗಿರುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ವಿಸ್ತ್ರತವಾಗಿ  ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಿವರಿಸಿದರು . ಈ ವೇಳೆ ಸಿಎಂ ಹಾಗೂ ಡಿಸಿಎಂ ಈ ಕಾಮಗಾರಿಗಳನ್ನು ತ್ವರಿತವಾಗಿ ಮಾಡಿಕೊಳ್ಳಲು ಅಗತ್ಯ ಕ್ರಮ ಕೈ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು  ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 22 ಪ್ರವಾಹ ಪ್ರದೇಶಗಳನ್ನು ಗುರುತಿಸಲಾಗಿದ್ದು, ಇದನ್ನು ಅವರ ಗಮನಕ್ಕೆ ತರಲಾಯಿತು. ಈ ವೇಳೆ ಪಣತೂರು 150 ಅಡಿ ರಸ್ತೆಯಲ್ಲಿ ಕೆಪಿಟಿಸಿಎಲ್ ಮತ್ತು ಅರಣ್ಯ ಇಲಾಖೆಗೆ ಸಂಬಂಧಪಟ್ಟಂತೆ ಸಮಸ್ಯೆಯಿದ್ದು, ಅದಕ್ಕೆ ಈಗ ಅನುಮತಿ ದೊರೆತಿದ್ದು, ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು. ಇದನ್ನೂ ಓದಿ: ದೇಶದಲ್ಲೇ ಆನೆ ಸಂಪತ್ತು ಹೆಚ್ಚು ಹೊಂದಿರುವ ರಾಜ್ಯ ನಮ್ಮದು: ಸಿಎಂ

ಈ ಸಂದರ್ಭದಲ್ಲಿ ಇಂಧನ ಸಚಿವರಾದ ಶ್ರೀ ಕೆ. ಜೆ. ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್, ನಗರ ಮಂಡಲದ ಅಧ್ಯಕ್ಷರಾದ ಶ್ರೀ ಎನ್. ಆರ್. ಶ್ರೀಧರ್ ರೆಡ್ಡಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related