ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮ ಎಂಬುವುದು ಎಲ್ಲೆಡೆ ಅತಿ ವೇಗವಾಗಿ ಬೆಳೆಯುತ್ತಿದ್ದು, ಪ್ರತಿಯೊಂದು ವ್ಯವಹಾರ ಸೇರಿದಂತೆ ಇನ್ನಿತರ ಚಟುವಟಿಕೆಗಳು ಕೂಡ ಡಿಜಿಟಲ್ ಮಾಧ್ಯಮದಲ್ಲಿ ನಡೆಯುತ್ತಿದ್ದು ಪ್ರತಿಯೊಬ್ಬರು ಡಿಜಿಟಲ್ ಮಾಧ್ಯಮದ ಮೊರೆ ಹೋಗಿದ್ದಾರೆ.
ಇನ್ನು ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಾಗಿದೆ. ಡಿಜಿಟಲ್ ಜಾಹೀರಾತು ನೀತಿಯನ್ನ ಜಾರಿಗೊಳಿಸಲು ಪ್ರಮುಖ ಕಾರಣಿಕರ್ತರಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರನ್ನ ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಅಭಿನಂದಿಸಲಾಯಿತು.
ಇದೆ ಸಂದರ್ಭದಲ್ಲಿ ಮಾತನಡಿದ ಅವರು, ರಾಜ್ಯದಲ್ಲಿ ಡಿಜಿಟಲ್ ನೀತಿ ತರುವ ಬಗ್ಗೆ 2 ತಿಂಗಳ ಹಿಂದೆ ಸಿಎಂ ಜೊತೆ ಡಿಜಿಟಲ್ ಮಾಧ್ಯಮದ ಅಗತ್ಯತೆ ಬಗ್ಗೆ ತಿಳಿ ಹೇಳಿ ಆ ಬಗ್ಗೆ ಚರ್ಚೆ ನಡೆಸಿದ್ದೆ. ಸಣ್ಣ ಪತ್ರಿಕೆಯಂತೆ ಡಿಜಿಟಲ್ ಮಾಧ್ಯಮವನ್ನು ಕೈಹಿಡಿಯುವ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಮಾತನಾಡಿ ಡಿಜಿಟಲ್ ಮಾಧ್ಯಮ ಸಂಸ್ಥೆಗಳಿಗೂ ಜಾಹೀರಾತು ನೀಡಲು ಹಣಕಾಸು ವೆಚ್ಚ, ಡಿಜಿಟಲ್ ಮೀಡಿಯಾ ನೀತಿಯ ನೀಲನಕ್ಷೆ ಬಗ್ಗೆಯೂ ತಿಳಿಸಿದೆ.
ಇದಕ್ಕೆ ಸಿಎಂ ಸಹಮತ ವ್ಯಕ್ತಪಡಿಸಿದರು. ಹೀಗಾಗಿ ಡಿಜಿಟಲ್ ಜಾಹೀರಾತು ನೀತಿ ತರಲು ಸಾಧ್ಯವಾಯಿತು. ಈ ನಿಟ್ಟಿನಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಪತ್ರಕರ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದೆ ಬದಲಾವಣೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ: ಸಿಎಂ
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತ್ರಕರ್ತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಾಧ್ಯಮ ಮಾನ್ಯತೆಯಿರುವವರಿಗೆ ಆರೋಗ್ಯ ಸಂಜೀವಿನಿಯಡಿ ಕಾರ್ಡ್ ನೀಡಲು ಕ್ರಮ ಕೈಗೊಳ್ಳುತ್ತೇವೆ. ಡಿಜಿಟಲ್ ಮಾಧ್ಯಮದವರಿಗೂ ವಾರ್ತಾ ಇಲಾಖೆಯಿಂದ ಐಡಿ ಕಾರ್ಡ್ ಅಥವಾ ಮಾನ್ಯತಾ ಕಾರ್ಡ್ ನೀಡಲು ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಜೊತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.
