ಲಕ್ಷ್ಮಣ್ ಸವದಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ…!

ಲಕ್ಷ್ಮಣ್ ಸವದಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ…!

ಅಥಣಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಪಕ್ಷವನ್ನು ಸೇರ್ಪಡೆ ಗೊಂಡಿದ್ದಾರೆ.

ಇನ್ನು ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿರುವ ಲಕ್ಷ್ಮಣ್ ಸವದಿಯವರು ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗುತ್ತಾರೆ ಎಂಬ ಮಾತುಕತೆ ರಾಜ್ಯ ರಾಜಕೀಯದಲ್ಲಿ ಗ್ರಾಸವಾಗಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಷ್ಮಣ್ ಸವದಿ ಅವರ ಕ್ಷೇತ್ರ ಅಥಣಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಅಥಣಿಯ ಮಹತ್ತರ ಯೋಜನೆಯಾದ ಅಮ್ಮಾಜೇಶ್ವರಿ ಏತ ನೀರಾವರಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. 1486 ಕೋಟಿ ರೂಪಾಯಿ ವೆಚ್ಚದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಅನುದಾನ ನೀಡಲಾಗಿದೆ.

11 ಹಳ್ಳಿಗಳ 9950 ಹೆಕ್ಟೇರ್ ಪ್ರದೇಶ ಹಾಗೂ 13 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಬಿಜೆಪಿ ಸರ್ಕಾರದ ವೇಳೆ ಚುನಾವಣೆ ಸಂದರ್ಭದಲ್ಲಿ ಅಂದಿನ ಸಿಎಂ ಬಸವರಾಜ್ ಬೊಮ್ಮಾಯೊ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದಾರೆ. ಬಸವರಾಜ್ ಬೊಮ್ಮಾಯಿ ಅವರು ಗೋಕರ್ಣದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಯ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಮಗಾರಿಯನ್ನ ಕೈ ಬಿಡಲಾಗಿತ್ತು.

ಈಗ ಸಿದ್ದರಾಮಯ್ಯರಿಂದ ಎರಡನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಇದೇ ತಿಂಗಳು 18 ಅಥವಾ 19 ರಂದು ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

 

Related