ಸಿಎಂ ಇಬ್ರಾಹಿಂ ರಾಜೀನಾಮೆ

ಸಿಎಂ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ2023ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಹಿಂದೆಂದೂ ಕಾಣದ ಸೋಲನ್ನು ಜೆಡಿಎಸ್ ಪಕ್ಷ ಸೋಲನ್ನು ಕಂಡಿದೆ.

ಹೌದು, ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ನಿರೀಕ್ಷೆಗಿಂತ ಕಡಿಮೆ ಸ್ಥಾನ ಪಡೆದಿದ್ದಲ್ಲದೆ ಹಳೆ ಮೈಸೂರು ಭಾಗದಲ್ಲೇ ಹಿಡಿತ ಕಳೆದುಕೊಂಡಿತು. ಈ ಸೋಲಿನ ಹೊಣೆ ಹೊತ್ತ ಸಿಎಂ ಇಬ್ರಾಹಿಂ ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅವರು ಬುಧುವಾರ ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ರಾಜಿನಾಮೆ ನಿರ್ಧಾರದ ಬಗ್ಗೆ ತಿಳಿಸಿದರು.

ಇವತ್ತು ದೇವೇಗೌಡರು ಮುಖಂಡರ ಸಭೆ ಕರೆದಿದ್ದಾರೆ. ಫಲಿತಾಂಶ ಬಂದ ಮಾರನೇ ದಿನವೇ ಸೋಲಿನ ನೈತಿಕ ಹೊಣೆಯನ್ನು ಹೊತ್ತಿದ್ದೇನೆ. ಇವತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದರು.

 

Related