ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿದರು.

ಇನ್ನು ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇವಲ ಬಿಜೆಪಿಯವರು ಮಾತ್ರ ಹಿಂದುಗಳಾ? ನಾವ್ಯಾರು ಹಿಂದುಗಳಲ್ವಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಜನರನ್ನು ಮರಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಅಧಿಕಾರ ಹಿಡಿದು ಕುಳಿತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹಿಂದುಗಳ ಮತ ಪಡೆಯಲೆಂದು ರಾಮ ಮಂದಿರ ಉದ್ಘಾಟನಾ ಹೆಸರಿನಲ್ಲಿ ಹಿಂದುಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಷ್ಮೆ ಮತ್ತು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ.ಮಹದೇವಪ್ಪ, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಹಾಗೂ ಶಾಸಕರುಗಳಾದ ಮರಿತಿಬ್ಬೇಗೌಡ, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಮಂಥರ್ ಗೌಡ ಸಿ.ಅನಿಲ್ ಕುಮಾರ್, ಕೆ.ಹರೀಶ್ ಗೌಡ, ಡಾ.ಡಿ.ತಿಮ್ಮಯ್ಯ, ಸಚಿವ ಕೆ.ವೆಂಕಟೇಶ್ ಅವರ ಪುತ್ರ ಯುವ ಮುಖಂಡ ನಿತಿನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Related