ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸಿಎಂ ಮಾಲಾರ್ಪಣೆ

ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸಿಎಂ ಮಾಲಾರ್ಪಣೆ

ಬೆಂಗಳೂರು: ಇಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೆ.ಆರ್.ವೃತ್ತದಲ್ಲಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.
ಬಿ.ಬಿ.ಎಂ.ಪಿ ವತಿಯಿಂದ ನಿರ್ಮಿಸಿರುವ 160 ಅಡಿ ಕಾರಂಜಿಯನ್ನು, ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘದ ವತಿಯಿಂದ ನಿರ್ಮಿಸಿರುವ ಇಂಜಿನಿಯರ್ ಭವನ, ತರಬೇತಿ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಶಾಸಕ ರಿಜ್ವಾನ್ ಆರ್ಷದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ , ಸಂಸ್ಥೆಯ ಅಧ್ಯಕ್ಷ ಪೀತಾಂಬರಸ್ವಾಮಿ ಇದ್ದರು.

Related