ಕೊರೋನಾ ನಿಯಂತ್ರಣಕ್ಕೆ ಸಿಎಂ ಸಭೆ

ಕೊರೋನಾ ನಿಯಂತ್ರಣಕ್ಕೆ ಸಿಎಂ ಸಭೆ

ಬೆಂಗಳೂರು : ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ನಿಯಂತ್ರಣದ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಯಾವ ರೀತಿ ಕ್ರಮಗಳನ್ನು ಜಾರಿಗೊಳಿಸಬೇಕು ಎನ್ನುವುದಕ್ಕೆ ಸಂಬAಧಿಸಿದAತೆ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ಈ ಹಿನ್ನೆಲೆ ನೆರೆಯ ಮಹಾರಾಷ್ಟ್ರ, ಕೇರಳದಿಂದ ಆಗಮಿಸುವವರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿ ಈಗಾಗಲೇ ಸರ್ಕಾರ ಆದೇಶಿಸಿದೆ. ಇದರ ಹೊರತಾಗಿ ಯಾವೆಲ್ಲ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕು ಎನ್ನುವುದರ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 960272ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಂದೇ ದಿನ 609 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 939499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಮೂವರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12390ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ರಾಜ್ಯದಲ್ಲಿ 8364 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Related