ನೆರ ಪರಿಹಾರಕ್ಕೆ ಸಿಎಂ ಸೂಚನೆ

ನೆರ ಪರಿಹಾರಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಡೆಸಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದಕೊಳ್ಳಲಿದ್ದಾರೆ.

ಸಭೆಯಲ್ಲಿ ಮಳೆಗೆ ತತ್ತರಿಸಿರುವ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಗತ್ಯವಾಗಿ ಬೇಕಾದ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

Related