ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಸಿಎಂ ಪುಷ್ಪನಮನ

ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಸಿಎಂ ಪುಷ್ಪನಮನ

ಬೆಂಗಳೂರು: ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘದ ಸಹಭಾಗಿತ್ವದಲ್ಲಿ ಕೆ.ಆರ್.ವೃತ್ತದ ಬಳಿ  ಆಯೋಜಿಸಿದ್ದ ಅಭಿಯಂತರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡುವ ಮೂಲಕ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಕೆ.ಇ.ಎಸ್.ಎ. ಅಧ್ಯಕ್ಷ ಪೀತಾಂಬರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

Related