ಸಿಎಂ ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು..!

ಸಿಎಂ ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು..!

ಬೆಂಗಳೂರು: ಬೆಳಗಾದರೆ ಸಾಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಸಭೆ, ಈ ಸಭೆ ಎಂದು ದಿನಪೂರ್ತಿ ಬಿಜಿಯಾಗಿರುತ್ತಾರೆ.

ಆದರೆ ಒಬ್ಬ ಮುಖ್ಯಮಂತ್ರಿ ಯಾಗಿ ಇಷ್ಟೆಲ್ಲ ಬಿಜಿಯಾಗಿದ್ದರೂ ಕೂಡ ಅವರು ಇಂದು (ಶುಕ್ರವಾರ ಜುಲೈ 05) ರಂದು ಬೆಂಗಳೂರು ನಗರದಲ್ಲಿರುವ ಮುರಾರ್ಜಿ ದೇಸಾಯಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಕನ್ನಡ ಪಾಠ ಮಾಡಿದ್ದಾರೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಕನ್ನಡ ಮೇಷ್ಟ್ರಾಗಿ ಮಕ್ಕಳಿಗೆ ಒಂದಷ್ಟು ಪಾಠ ಮಾಡಿದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದರು. ಇದನ್ನೂ ಓದಿ: ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಸಂದಿ ಎಂದರೇನು? ಸಂದಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು, ಯಾವಾಗ ಆರಂಭಿಸಿದರು ಎಂದು ಸಿಎಂ  ಮಕ್ಕಳಿಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಮಕ್ಕಳು ನೀವೇ ಆರಂಭಿಸಿದ್ದು ಎಂದು ಹೇಳಿದರು. ಬಳಿಕ 94-95 ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಇದಕ್ಕೆ ಮಕ್ಕಳು ಚಪ್ಪಾಳೆ ತಟ್ಟಿದರು.

ಒಟ್ಟಿನಲ್ಲಿ ಇಷ್ಟೆಲ್ಲ ಬ್ಯುಸಿ ಶೆಡ್ಯೂಲ್ ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪಾಠ ಮಾಡಿದ್ದು ಸರ್ಕಾರಿ ವಿದ್ಯಾರ್ಥಿಗಳಿಗೆ ಓದಿನಲ್ಲಿ ಇನ್ನಷ್ಟು ಆಸಕ್ತಿ ತುಂಬಿಸುತ್ತಾರೆ.

Related