ಜಿಲ್ಲಾಧಿಕಾರಿಯೊಂದಿಗೆ ಸಿಎಂ ವಿಡಿಯೋ ಸಂವಾದ

ಜಿಲ್ಲಾಧಿಕಾರಿಯೊಂದಿಗೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಯಂತ್ರಣ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಕೋವಿಡ್ 19 ಪರೀಕ್ಷೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಿಬೇಕು. ಪರೀಕ್ಷೆಗೆ ಅಗತ್ಯವಿರುವ ಕಿಟ್ ಒದಗಿಸುವ ವ್ಯವಸ್ಥೆ ಮಾಡಲಾಗುವುದು. ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಲಾಗುವುದು.

ಪ್ರಯೋಗಾಲಯಗಳು ಕಡಿಮೆ ಇದ್ದಲ್ಲಿ ಪಕ್ಕದ ಜಿಲ್ಲೆಯಲ್ಲಿ ಮಾಡಿಸಲು ಕ್ರಮ ವಹಿಸಬೇಕು, ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳು ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಈ ಬಾರಿಯ ಪ್ರವಾಹದಿಂದ ಒಟ್ಟು 8071 ಕೋಟಿ ರೂ.ಗಳ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ತಂಡಕ್ಕೆ ಜಿಲ್ಲಾಧಿಕಾರಿಗಳು ಹಾನಿಯ ಪ್ರಮಾಣವನ್ನು ಮನವರಿಕೆ ಮಾಡಿಕೊಟ್ಟಿದ್ದು, ಕೇಂದ್ರದಿಂದ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ವರದಿಯನ್ನು ಸಲ್ಲಿಸಿಸಲಾಗಿದೆಂದು ಹೇಳಿದರು.

Related