ರಕ್ಷಾ ರಾಮಯ್ಯ ಪರವಾಗಿ ಸಿಎಂ ಮತ ಬೇಟೆ

ರಕ್ಷಾ ರಾಮಯ್ಯ ಪರವಾಗಿ ಸಿಎಂ ಮತ ಬೇಟೆ

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ರಣರಂಗೇರುತ್ತಿದ್ದು ನಿನ್ನೆ ಕಾಂಗ್ರೆಸ್ ನಾಯಕ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತ ಪ್ರಚಾರ ಮಾಡಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ರಕ್ಷಾ ರಾಮಯ್ಯ ಅವರ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

 

Related