ನವದೆಹಲಿ, ಸೆ. 20: ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ( NSUI) ಕೀರ್ತಿ ನೇತೃತ್ವದ ಪದಾಧಿಕಾರಿಗಳ ತಂಡ ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಅವಕಾಶ ಒದಗಿಸಿಕೊಡುವಂತೆ ವಿನಂತಿಸಿತು.
ಸೆ.22 ರಂದು ದೆಹಲಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ NSUI ಅಭ್ಯರ್ಥಿಗಳ ಪರವಾಗಿ ರಾಜ್ಯದಿಂದ ಬಂದಿರುವ 50 ಮಂದಿ NSUI ಕಾರ್ಯಕರ್ತರು ಕಳೆದ 15 ದಿನಗಳಿಂದ ಪ್ರಚಾರ ನಡೆಸುತ್ತಿರುವುದಾಗಿ ರಾಜ್ಯಾದ್ಯಕ್ಷ ಕೀರ್ತಿ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಇದೆ ಸಂದರ್ಭದಲ್ಲಿದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಯಶಸ್ಸು ಸಿಗಲಿ ಎಂದು ಮುಖ್ಯಮಂತ್ರಿಗಳು ಕಾರ್ಯಕರ್ತರಿಗೆ ಹಾರೈಸಿದರು.