ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಬಾಗಲಕೋಟೆ : ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು.

ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು.

ನಂತರ ಆಲಮಟ್ಟಿಯ ಕೆ.ಬಿ.ಜಿ.ಎನ್.ಎಲ್ ಸಭಾಂಗಣದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

Related