ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದ ಸಿಎಂ

ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರುಗಳಾದ ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಇತರೆ ಸಚಿವರಾದ ಜಿ.ಪರಮೇಶ್ವರ್, ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ  ಗೋವಿಂದರಾಜ್ ಉಪಸ್ಥಿತರಿದ್ದರು.

Related