ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಮುಖಂಡರಾದ ಬಿ ಕೆ ಹರಿಪ್ರಸಾದ್, ಅಜಯ್ ಸಿಂಗ್, ರಮೇಶ್ ಬಾಬು, ಮಂಜುನಾಥ್ ಗೌಡ ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ 2ನೇ ವರ್ಷದ ಬೃಹತ್ ಸಾಧನಾ ಸಮಾರಂಭ
