ಬೆಂಗಳೂರು: ವಿಧಾನಸೌಧದಲ್ಲಿ ಇಂದು (ಜೂನ್ 11 ಮಂಗಳವಾರ) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನ ಸಭೆಯನ್ನು ನಡೆಸಲಾಯಿತು.
ಇನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು.