ನಿಗಮ ಕೇಂದ್ರ ಕಛೇರಿಯಲ್ಲಿ ಪರಿಹಾರ ವಿತರಣಾ ಕಾರ್ಯಕ್ರಮ

ನಿಗಮ ಕೇಂದ್ರ ಕಛೇರಿಯಲ್ಲಿ ಪರಿಹಾರ ವಿತರಣಾ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೇವೆಯಲ್ಲಿದ್ದ ನೌಕರರ 4 ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ತಲಾ ರೂ.1 ಕೋಟಿ ಒಟ್ಟು ಇಲ್ಲಿಯವರೆಗೆ ಇದೂ ಸೇರಿ 17 ಸಿಬ್ಬಂದಿಗಳ ಕುಟುಂಬಕ್ಕೆ ವಿಮಾ‌ ನೀಡಿಲಾಗಿದೆ ಹಾಗೂ ಕುಟುಂಬ ಕಲ್ಯಾಣ ಯೋಜನೆಯಡಿ 23 ಸೇವೆಯಲ್ಲಿದ್ದು ಮೃತ ಪಟ್ಟ ನೌಕರರ ಅವಲಂಬಿತರಿಗೆ ತಲಾ ರೂ.10 ಲಕ್ಷ ಪರಿಹಾರ ಹಣ ನೀಡಿಕೆ ಇಲ್ಲಿಯವರೆಗೆ ಇದೂ ಸೇರಿ ಒಟ್ಟು 39 ಸಿಬ್ಬಂದಿಗಳ ಕುಟುಂಬಕ್ಕೆ ಹಣ ನೀಡಿಕೆ ಮತ್ತು ನಿಗಮದ ವಾಹನಗಳಲ್ಲಿ ಪ್ರಯಾಣಿಸುತ್ತಿರುವಾಗ ಅಪಘಾತಕ್ಕೊಳಪಟ್ಟು ಮೃತರಾದ 04 ಪ್ರಯಾಣಿಕರ ಅವಲಂಭಿತರಿಗೆ ತಲಾ ರೂ.10 ಲಕ್ಷ ಪರಿಹಾರ ವಿತರಣೆಯನ್ನು ಇಂದು (ಜೂನ್‌ 12) ರಂದು  ಕರಾರಸಾ ನಿಗಮ, ಕೇಂದ್ರ ಕಛೇರಿ, ಬೆಂಗಳೂರಿನಲ್ಲಿನೀಡಲಾಯಿತು.

ಇನ್ನು ಈ ಸಂದರ್ಭದಲ್ಲಿ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು ಮಾತನಾಡಿ, ನಿಗಮದ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಮೃತಪಟ್ಟವರ ಜೀವ ಅಮೂಲ್ಯವಾದದ್ದು, ಅದನ್ನು ಮರಳಿ ತರಲಾಗುವುದಿಲ್ಲ. ಆದರೆ ಅವರ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ನಿಗಮವು ರೂಪಿಸಿರುವ ಯೋಜನೆ ದೂರದೃಷ್ಠಿಯನ್ನು ಹೊಂದಿರುವುದಾಗಿ ತಿಳಿಸಿದರು. ಈ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ಕಟ್ಟಿಕೊಳ್ಳಲು ಉಪಯೋಗಿಸಿಕೊಳ್ಳಿ, ಬೇರೆ ಇತರೆ ಎಲ್ಲೂ ಹಣ ಪೋಲು ಮಾಡದಂತೆ ಎಚ್ಚರವಹಿಸಲು ತಿಳಿಸಿದರು. ಇದನ್ನೂ ಓದಿ: ನಟ ದರ್ಶನ್​ ಫೋಟೋಗೆ ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ನಿಗಮವು ಯಶಸ್ವಿಯಾಗಿ ಶಕ್ತಿ ಯೋಜನೆ ಅನುಷ್ಠಾನಗೊಳಿಸಲು ಮುಖ್ಯ ಪಾತ್ರ ವಹಿಸಿರುವ ನಿಗಮದ ಚಾಲಕರು, ನಿರ್ವಾಹಕರು, ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರುಗಳ ಪಾತ್ರ ಅಭಿನಂದನೀಯ ಎಂದು ತಿಳಿಸಿದರು. ನಿಗಮದ ವಿದ್ಯಾ ಚೇತನ ವಿದಾರ್ಥಿ ವೇತನ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.

ಮಾನ್ಯ ಅಧ್ಯಕ್ಷರು ಕ.ರಾ.ರ.ಸಾ ನಿಗಮ ಶ್ರೀ. ಶ್ರೀನಿವಾಸ್ ಗುಬ್ಬಿ ರವರು ಮಾತನಾಡಿ ನಿಗಮದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಶ್ರಮ ಜೀವಿಗಳಾಗಿದ್ದು ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಾಗಿರುತ್ತದೆ. ಇಂದು ವಿತರಿಸಲಾಗಿರುವ ಪರಿಹಾರ ಮೊತ್ತವನ್ನು ಕುಟುಂಬ ವರ್ಗದವರು ಸಮರ್ಪಕವಾಗಿ ಬಳಸಿಕೊಂಡು ಕುಟುಂಬದ ಆರ್ಥಿಕ ಸ್ವಾವಲಂಬನೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿ.ಅನ್ಬುಕುಮಾರ್, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಶ್ರೀ ಅನಂತಸುಬ್ಬರಾವ್, ಶ್ರೀ ವಿಜಯಭಾಸ್ಕರ್, ಶ್ರೀ.ರೇವಪ್ಪ, ಶ್ರೀ.ಮಂಜುನಾಥ್, ಶ್ರೀ ಚಂದ್ರಶೇಖರ್, ಶ್ರೀ ನಾಗರಾಜು,ಶ್ರೀ.ವೆಂಕಟರಮಣಪ್ಪ, ಶ್ರೀ .ಜಯರಾಜ ಅರಸು ಇತರರು  ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Related