ಬೆಂಗಳೂರು: ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ರಚಿತರಾಮ್ ಅವರ ವಿರುದ್ಧ ನಿರ್ದೇಶಕ ನಾಗಶೇಖರ್ ಹಾಗೂ ಶ್ರೀನಗರ ಕಿಟ್ಟಿ ಅವರು ದೂರು ದಾಖಲಿಸಿದ್ದಾರೆ.
ಸಿನಿಮಾ ಪ್ರಚಾರಕ್ಕೆಂದು ರಚಿತಾ ರಾಮ್ ಅವರ ಬರೆದೆ ಇದ್ದ ಕಾರಣಕ್ಕೆ ರಚಿತರಾಮ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಫಿಲ್ಮ್ ಚೇಂಬರ್ಗೆ ದೂರು ಕೊಟ್ಟ ನಿರ್ದೇಶಕ ನಾಗಶೇಖರ್ ಮಾತನಾಡಿ, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ. ಇದನ್ನೂ ಓದಿ: Breaking: ಕಣ್ಣೇ.. ಅದಿರಿಂದಿ ಗಾಯಕಿ ಬರ್ತಡೆ ಪಾರ್ಟಿಯಲ್ಲಿ ಮಾದಕ ವಸ್ತು ಪತ್ತೆ..!
ರಚಿತರಾಮ್ ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ. ಸಂಜು ವೆಡ್ಸ್ ಗೀತಾ ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರು ಒಂದು ದಿನವೂ ರಚಿತಾ ರಾಮ್ ಸಪೋರ್ಟ್ ಕೊಟ್ಟಿಲ್ಲ ಎಂದಿದ್ದಾರೆ.
