ತೇಜಸ್ವಿ ಸೂರ್ಯ ಅವರ ವಿರುದ್ಧ ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ದೂರು

ತೇಜಸ್ವಿ ಸೂರ್ಯ ಅವರ ವಿರುದ್ಧ ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ದೂರು

ಬೆಂಗಳೂರು: ಲೋಕಸಭಾ ಚುನಾವಣೆಗೆ ಇಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಇಂದು ಬಿಜೆಪಿ ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯ ಮೂಲಕ ಜಯನಗರದ ಬಿಬಿಎಂಪಿ ಕಚೇರಿಗೆ ಭೇಟಿ ನೀಡಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಇನ್ನು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ)  ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ತೇಜಸ್ವಿ ಸೂರ್ಯ ಅವರು ನಾಮಪತ್ರ ಸಲ್ಲಿಸುವ ವೇಳೆ ಬೃಹತ್ ರ್ಯಾಲಿಯನ್ನು ಕೈಗೊಂಡಿದ್ದರು. ಈ ರ್ಯಾಲಿಯಲ್ಲಿ ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಭಾಗಿಯಾಗಲು ತೇಜಸ್ವಿ ಸೂರ್ಯ ಅವರು ಒತ್ತಡ ಹಾಕಿದ್ದಾರೆ ಎಂಬ ಕಾರಣಕ್ಕೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳು ಒಂದು ವೇಳೆ ರ್ಯಾಲಿಗೆ ಬರದಿದ್ದರೆ ಹಾಜರಾತಿ ನೀಡಲ್ಲವೆಂದು ಮೆಸೇಜ್​ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆಯನ್ನು ರದ್ದು ಮಾಡುವಂತೆ ಚುನಾವಣಾಧಿಕಾರಿಗೆ ಎನ್.​​ಎಸ್​​.ಯು.ಐ ದೂರು ನೀಡಿದೆ.

 

Related