ಮೈಸೂರು ರಾಜರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು..!

ಮೈಸೂರು ರಾಜರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು..!

ಮೈಸೂರು: ಲೋಕಸಭಾ ಚುನಾವಣೆಗೆ ಎಲ್ಲಾ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯು ಬೇರೆ ಯಾವೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಮತ್ತು ಇನ್ನಿತರ ಕಾರ್ಯಕ್ರಮಗಳನ್ನು ಮಾಡಬಾರದೆಂದು  ಚುನಾವಣಾ ಆಯೋಗವು ತಿಳಿಸಿದೆ.

ಇನ್ನು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ಹೌದು ಮೈಸೂರು ಯದುವೀರ್ ಒಡೆಯರವರ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ.

104.8 ರೇಡಿಯೋ ಮಿರ್ಚಿಯಲ್ಲಿ ಯದುವೀರ್ ರವರ ರಾಜರ ಬಾಯಿಂದ ರಾಜಕತೆ ಕಥೆಗಳು ಇನ್ನಿತರ ಕಾರ್ಯಕ್ರಮಗಳು ಪ್ರಸಾರವಾಗುತ್ತವೆ,ಇವನ್ನು ಪ್ರಸಾರವಾಗದಂತೆ ತೆಡೆಹಿಡಿಯಬೇಕೆಂದು ಕೆಪಿಸಿಸಿ ವಕ್ತಾರ ಹೆಚ್​.ಎ.ವೆಂಕಟೇಶ್ ದೂರು ನೀಡಿದ್ದಾರೆ.

ಯದುವೀರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಹಿನ್ನೆಲೆ ನಿರ್ಬಂಧನೆ ವಿಧಿಸಿ. ರೇಡಿಯೋದಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮದ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತು ಹಾಕಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಯದುವೀರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಚುನಾವಣಾ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಹೆಚ್​.ಎ.ವೆಂಕಟೇಶ್ ಮನವಿ ಮಾಡಿದ್ದಾರೆ.

Related