ವಿಧಾನಸಭೆಯಲ್ಲಿ ಸುರೇಶ್ ಅಂಗಡಿಗೆ ಸಂತಾಪ

ವಿಧಾನಸಭೆಯಲ್ಲಿ ಸುರೇಶ್ ಅಂಗಡಿಗೆ ಸಂತಾಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸಂಜೆ ಮೃತರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದರು.

ಅಗಲಿದ ಗಣ್ಯರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನಾಚಾರಣೆ ಮಾಡಲಾಯಿತು.

ಸುರೇಶ್ ಅಂಗಡಿಯವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ. ಬೆಳಗಾವಿ ಕ್ಷೇತ್ರದಿಂದ 2004ರಿಂದ ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯದಲ್ಲಿ ಉತ್ತಮ ಹೆಸರು ಮನ್ನಣೆ ಗಳಿಸಿದ್ದರು.

Related