ತಹಶೀಲ್ದಾರ್ ಹತ್ಯೆಗೆ ಖಂಡನೆ

  • In State
  • July 11, 2020
  • 379 Views
ತಹಶೀಲ್ದಾರ್ ಹತ್ಯೆಗೆ ಖಂಡನೆ

ರಾಮದುರ್ಗ:ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಹಾಗೂ ಸರ್ಕಾರಿ  ಅಧಿಕಾರಿ-ನೌಕರರಿಗೆ ಅಗತ್ಯ ರಕ್ಷಣೆ ನೀಡುವಂತೆ ಒತ್ತಯಿಸಿ, ರಾಜ್ಯ ಸರ್ಕಾರಿ ನೌಕರರ ಸಂಘದಿಂದ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸದಸ್ಯರು, ಬಿ.ಕೆ. ಚಂದ್ರಮೌಳೇಶ್ವರ ಅವರು ಪೊಲೀಸ್ ರಕ್ಷಣೆಯಲ್ಲಿ ಜಂಟಿ ಸರ್ವೇ ಕಾರ್ಯ ನಿರತರಾಗಿದ್ದ ಸಂದರ್ಭದಲ್ಲಿ ಆರೋಪಿ ವೆಂಕಟಪತಿ ಪೊಲೀಸರ್ ಸಮ್ಮುಖದಲ್ಲಿ ಏಕಾಏಕಿ ಚಾಕುವಿನಿಂದ ಇರಿದು ಹತ್ಯಗೈದಿರುವ ಕೃತ್ಯವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಖಂಡಿಸುತ್ತದೆ. ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭಗಳಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ಸಂಭವಿಸುತ್ತಿದ್ದು, ಅದರಲ್ಲೂ ಕಂದಾಯ, ಭೂಮಾಪನಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆರೋಗ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಠಿಣ ಕಾನೂನುಗಳು ಜಾರಿಯಲ್ಲಿರದ ಕಾರಣ ಇಂತಹ ಕೃತ್ಯಗಳು ಮರುಕಳಿಸುತ್ತಿದ್ದು, ಇಂತಹ ಪರಸ್ಥಿತಿಗಳು ಮರುಕಳಿಸದಂತೆ ಕಠಿಣ ಕಾನೂನುಗಳನ್ನು ರಾಜ್ಯ ಸರಕಾರ ರೂಪಿಸಬೇಕು. ಅಲ್ಲದೇ ಕೃತ್ಯ ಎಸಗಿದ ಅಪರಾಧಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ವಾತಾವರಣ ನಿರ್ಮಾಣ ಮಾಡಲು ಅಗತ್ಯ ರಕ್ಷಣೆ ಕೈಗೊಳ್ಳುವದು, ಮೃತರ ಕುಟುಂಬಕ್ಕೆ ಸರ್ಕಾರದಿಂದ ಗರಿಷ್ಠ ಮಟ್ಟದ ಪರಿಹಾರ ನೀಡುವದು ಸೇರಿದಂತೆ ಇತರ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

Related