ಬಿಜೆಪಿ, ಜೆಡಿಎಸ್‌ನ ನೂತನ ಸಚಿವರು ಹಾಗೂ ಸಂಸದರಿಗೆ ಅಭಿನಂದನಾ ಕಾರ್ಯಕ್ರಮ

ಬಿಜೆಪಿ, ಜೆಡಿಎಸ್‌ನ ನೂತನ ಸಚಿವರು ಹಾಗೂ ಸಂಸದರಿಗೆ ಅಭಿನಂದನಾ ಕಾರ್ಯಕ್ರಮ

ಬೆಂಗಳೂರು: 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ಸಚಿವರು ಮತ್ತು ಸಂಸದರಾಗಿ ಆಯ್ಕೆ ಯಾದವರಿಗೆ ಎಂದು ಜೂನ್ 22 ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಕಮಲಾ ಹಂಪನಾ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ

ಹೌದು, ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ ಎನ್ ಡಿಎ ನೂತನ ಸಂಸದರಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್. ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿ ಪಕ್ಷದ ನಾಯಕ ಆರ್. ಅಶೋಕ್, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹಾಗೂ ನೂತನ ಸಂಸದರು ಹಾಜರಿದ್ದರು.

 

Related