ಬಿಜೆಪಿ ಜಾಹಿರಾತು ರಾಜ್ಯಕ್ಕೆ ಅವಮಾನ : ಸಿದ್ದರಾಮಯ್ಯ

ಬಿಜೆಪಿ ಜಾಹಿರಾತು ರಾಜ್ಯಕ್ಕೆ ಅವಮಾನ : ಸಿದ್ದರಾಮಯ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡುಗೆ ಎಂಬ ಪದ ಬಳಸಿ ಜಾಹಿರಾತು ನೀಡುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ ರಾಜ್ಯದ ಜನರನ್ನೇನು ದಡ್ಡರು, ಯೋಚಿಸುವ ಶಕ್ತಿ ಇಲ್ಲದವರು  ಎಂದುಕೊಂಡಿದ್ದಾರಾ? ಈ ಬಿಜೆಪಿಯವರ ತಲೆ ಸರಿ ಇದೆಯಾ? 2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿಯವರು   “ಕೊಡುಗೆ” ನೀಡಿದ್ದಾರೆ  ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ.

ರಾಜ್ಯದ ಬಿಜೆಪಿ ಸರ್ಕಾರಕ್ಕೆ ಏನಾದರೂ ಬೆನ್ನು ಮೂಳೆ ಇದ್ದರೆ ಮೊದಲು ಈ ಜಾಹಿರಾತಿಗೆ ವಿರೋಧ ವ್ಯಕ್ತಪಡಿಸಬೇಕಾಗಿತ್ತು. ಯಾಕೆಂದರೆ ಕಳೆದ 8 ವರ್ಷಗಳಲ್ಲಿ ಮೋದಿಯವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ.

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ  ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ [19 ಲಕ್ಷ ಕೋಟಿ] ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ. ನರೇಗಾ ಮುಂತಾದ ಯೋಜನೆಗಳಲ್ಲಿ ಜನರ ಬೆವರಿಗೆ ಕೊಡುವ ಪ್ರತಿಫಲವನ್ನು ಈ ಬಿಜೆಪಿಯವರು ಕೊಡುಗೆ ಎನ್ನುತ್ತಾರಲ್ಲ, ಇವರು ಮನುಷ್ಯರಾ ಎಂಬುದು ನನ್ನ ಅನುಮಾನ ಎಂದುರು.

 

Related