ಶಿವಮೊಗ್ಗ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಯುತ್ತಿದೆ. ಭ್ರಷ್ಟಾಚಾರದಿಂದ ರಾಜ್ಯ ಮುಳುಗಿ ಹೋಗಿದ್ದು, ಅಭಿವೃದ್ದಿ ನಿಂತುಹೋಗಿದೆ. ಇದು ಪ್ರಜಾಪ್ರಬುತ್ವದ ವ್ಯವಸ್ಥೆಯ ಅತ್ಯಂತ ಅಪಾಯದ ಸ್ಥಿತಿ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬಿಜೆಪಿ ಸರ್ಕಾರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಜನಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ಹೋರಾಟದ ನೆಲ. ಹೋರಾಟದ ಮೂಲಕವೇ ಜಿಲ್ಲೆಗೆ ಹಲವು ಶಾಸನ, ಸೌಲಭ್ಯಗಳನ್ನು ಪಡೆಯಲಾಗಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೋರಾಟದ ಮೂಲಕವೇ ಮತ್ತೆ ಅಧಿಕಾರಕ್ಕೆ ಬರೋಣ. ಜನವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.